alex Certify BIG NEWS: ಮನೆಯಲ್ಲೇ ಶವವಾಗಿ ಪತ್ತೆಯಾದ ನಟ ಶರತ್ ಚಂದ್ರನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮನೆಯಲ್ಲೇ ಶವವಾಗಿ ಪತ್ತೆಯಾದ ನಟ ಶರತ್ ಚಂದ್ರನ್

ಮಲಯಾಳಿ ನಟ ಶರತ್ ಚಂದ್ರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆನ್ನಲಾಗಿದ್ದು, ಇದಕ್ಕೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ನಲ್ಲಿ ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಿದ್ದಾರೆ.

37 ವರ್ಷದ ನಟ ಅಂಗಮಾಲಿ ಡೈರೀಸ್, ಒರು ಮೆಕ್ಸಿಕನ್ ಅಪರಾಧ, ಸಿಐಎ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದು, ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದರು.

ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...