ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಮಾಲ್ಡೀವ್ಸ್‌ನ ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ತಮ್ಮ ಮೊದಲ ದ್ವಿಪಕ್ಷೀಯ ಭೇಟಿಗಾಗಿ ಭಾರತಕ್ಕೆ ಭಾನುವಾರ ಆಗಮಿಸಿದರು.
ಈ ಭೇಟಿಯ ವೇಳೆ ಅಧ್ಯಕ್ಷ ಮುಯಿಝು ಅವರು ಅಧ್ಯಕ್ಷ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ದೆಹಲಿ ಆಗಮಿಸಿದ ಅವರನ್ನು ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಸ್ವಾಗತಿಸಿದರು. ಅಧ್ಯಕ್ಷ ದ್ರೌಪದಿ ಮುರ್ಮು ಅವರ ಅಧಿಕೃತ ಆಹ್ವಾನದ ಮೇರೆಗೆ ಅಕ್ಟೋಬರ್ 6-10 ರವರೆಗೆ ಮುಯಿಝು ಭಾರತ ಪ್ರವಾಸ ಕೈಗೊಂಡಿದ್ದಾರೆ.
ಇತ್ತೀಚೆಗೆ, ನ್ಯೂಯಾರ್ಕ್‌ನಲ್ಲಿ 79 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವೇಳೆ ಅವರು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದು, ನಾವು ಅತ್ಯಂತ ಬಲವಾದ ದ್ವಿಪಕ್ಷೀಯ ಸಂಬಂಧವನ್ನು ಹೊಂದಿದ್ದೇವೆ ಎಂದು ತಿಳಿಸಿದ್ದರು.