ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅ. 26 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಎಲ್ಲಾ ಹಂತದ ನಾಯಕರನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.
ಭಾರತ ಐಕ್ಯತಾ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದಲ್ಲಿ ಇಂದು ಸಂವಿಧಾನ ಅಪಾಯದಲ್ಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ ಎಂದು ದೂರಿದ್ದಾರೆ.
ಎಲ್ಲರನ್ನೂ ಒಂದುಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತೇನೆ. ಎಐಸಿಸಿ ಅಧ್ಯಕ್ಷನಾಗಿ ಆಯ್ಕೆಯಾಗಿರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ದೇಶಾದ್ಯಂತ ಪಕ್ಷವನ್ನು ಸಂಘಟಿಸಲು ಮತ್ತಷ್ಟು ಪ್ರಯತ್ನಿಸುತ್ತೇನೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು. ಯುವ ನಾಯಕರು, ಹಿರಿಯ ನಾಯಕರ ಜೊತೆಗೂಡಿ ಪಕ್ಷವನ್ನು ಸಂಘಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.