ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ಗುಲಾಮ್ ನಬಿ ಆಜಾದ್ ರಾಜ್ಯಸಭೆ ಸದಸ್ಯತ್ವ ಅವಧಿ ಮುಕ್ತಾಯವಾಗಿದೆ. ಅವರು ನಿವೃತ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವರಾದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷದ ನಾಯಕರಾಗಿ ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲ ಅವಧಿಯಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಆಗ ಪ್ರತಿಪಕ್ಷದ ಸ್ಥಾನ ವಹಿಸಿಕೊಳ್ಳಲು ಅಗತ್ಯವಾದ ಸಂಖ್ಯಾಬಲ ಕಾಂಗ್ರೆಸ್ ಪಕ್ಷಕ್ಕೆ ಇರಲಿಲ್ಲ.
ಮಲ್ಲಿಕಾರ್ಜುನ ಖರ್ಗೆ ಪ್ರಸ್ತುತ ರಾಜ್ಯಸಭೆ ಸದಸ್ಯರಾಗಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿರುವ ಗುಲಾಮ್ ನಬಿ ಆಜಾದ್ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.