ಕಲಬುರ್ಗಿ: ಎಐಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ ಕಲಬುರ್ಗಿಗೆ ಇಂದು ಆಗಮಿಸಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ಸ್ವಾಗತಕ್ಕಾಗಿ ಕಲಬುರ್ಗಿ ನಗರವನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗಿದೆ. ಶನಿವಾರ ‘ಕಲ್ಯಾಣ ಕ್ರಾಂತಿ’ ಹೆಸರಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಗರೇಶ್ವರ ಶಾಲೆಯಿಂದ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಎರಡು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವು ನಾಯಕರು ‘ಕಲ್ಯಾಣ ಕ್ರಾಂತಿ’ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.