
ಕಲಬುರಗಿ: ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ ಇದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕಲ್ಬುರ್ಗಿಯಲ್ಲಿ ಮಾತನಾಡಿದ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಮೊದಲೇ ಸುಗ್ರೀವಾಜ್ಞೆ ಮೂಲಕ ಹಿಂಪಡೆಯಬೇಕಿತ್ತು ಎಂದಿದ್ದಾರೆ.
5 ರಾಜ್ಯಗಳ ವಿಧಾನಸಭೆ ಚುನಾವಣೆ ಸಮೀಪದಲ್ಲಿದೆ. ಅದರ ಪರಿಣಾಮ ತಮ್ಮ ಪಕ್ಷದ ಮೇಲೆ ಆಗಬಹುದು ಎಂದು ಕಾಯ್ದೆ ಹಿಂಪಡೆಯಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲಾಗಿದೆ ಎಂದು ಖರ್ಗೆ ಟೀಕಿಸಿದ್ದಾರೆ.