ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಸಲ ಲಾಕ್ ಡೌನ್ ಮಾಡಿದ ಸಂದರ್ಭದಲ್ಲಿ ಪರಿಹಾರಕ್ಕೆ ಜನರಿಗೆ ತಲುಪಿಲ್ಲ. ಕಟ್ಟಡ ಕಾರ್ಮಿಕರಿಗೆ ಅವರ ನೀತಿಯಿಂದಲೇ ಹಣ ನೀಡಲಾಗಿದೆ ಎಂದು ಟೀಕಿಸಿದ ಅವರು, ಲಾಕ್ ಡೌನ್ ನಿಂದ ಆರ್ಥಿಕತೆಗೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.