ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆಗಾಗಿ ಮೊದಲ ಮಹತ್ವದ ಸಭೆ ನಡೆಸಲಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಕರೆ ನೀಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಜಿ. ಪರಮೇಶ್ವರ್, ಬಿ.ಕೆ. ಹರಿಪ್ರಸಾದ್, ಸತೀಶ್ ಜಾರಕಿಹೊಳಿ ಸೇರಿದಂತೆ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ವಿಧಾನಸಭೆ ಚುನಾವಣೆ ಸಿದ್ಧತೆ ಜೊತೆಗೆ ಕಾಂಗ್ರೆಸ್ ನಾಯಕರಿಗೆ ಒಗ್ಗಟ್ಟಿನ ಸಂದೇಶ ನೀಡಲು ಈ ಸಭೆ ಕೈಗೊಳ್ಳಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಸಲಾಗುತ್ತಿದ್ದು, ಚುನಾವಣೆ ಗೆಲುವಿಗೆ ಕಾರ್ಯತಂತ್ರ, ಪಕ್ಷ ಸಂಘಟನೆ ಮತ್ತು ರಥಯಾತ್ರೆ ಕೈಗೊಳ್ಳುವ ಕುರಿತು ಚರ್ಚೆ ನಡೆಯಲಿದೆ. ಗೊಂದಲಗಳಿಗೆ ಅವಕಾಶ ನೀಡದಂತೆ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಮಲ್ಲಿಕಾರ್ಜುನ ಖರ್ಗೆ ಸಂದೇಶ ನೀಡಲಿದ್ದಾರೆ.