ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕೆ ಇಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಐ.ಎನ್.ಡಿ.ಎ.ಐ. ಮೈತ್ರಿಕೂಟದ ಅಭ್ಯರ್ಥಿಯಾಗಿ ಉತ್ತರ ಪ್ರದೇಶದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆದಿದೆ. ಈ ಮೂಲಕ ದಲಿತರು ಮತ್ತು ಮುಸ್ಲಿಂ ಸಮುದಾಯದ ಮತಗಳನ್ನು ಸೆಳೆದು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವುದು ಈ ಕಾರ್ಯತಂತ್ರದ ಉದ್ದೇಶವಾಗಿದೆ ಎನ್ನಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮುದಾಯ ಪ್ರತಿನಿಧಿಸುವುದರಿಂದ ಉತ್ತರ ಪ್ರದೇಶದ ಮೀಸಲು ಕ್ಷೇತ್ರ ಒಂದರಿಂದ ಅವರು ಸ್ಪರ್ಧಿಸಿದರೆ ಗೆಲುವು ಸುಲಭವಾಗಿದೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ಅವರ ಸ್ಪರ್ಧೆಯಿಂದ ದಲಿತರು ಮತ್ತು ಮುಸ್ಲಿಂಮರ ಸಮುದಾಯದ ಮತಗಳನ್ನು ಸೆಳೆಯಬಹುದು. ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಬಹುದು ಎಂಬುದು ನಾಯಕರ ಲೆಕ್ಕಾಚಾರವಾಗಿದ್ದು, ಈ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.