ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪ್ರಧಾನಿ ಮೋದಿಯನ್ನು ‘ನಾಲಾಯಕ್’ ಎಂದು ಪ್ರಿಯಾಂಕ್ ಕರೆದಿದ್ದ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿದೆ. ಪ್ರಿಯಾಂಕ್ ಅವರು ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿದ ಕಾರಣಕ್ಕೆ ಮಾದರಿ ನೀತಿ ಸಂಹಿತೆ ಉಲ್ಲೇಖಿಸಿ ಚುನಾವಣಾ ಆಯೋಗವು ಮೇ 2 ರಂದು ದೂರು ಸ್ವೀಕರಿಸಿದೆ ಎಂದು ಹೇಳಿದೆ.
ಮಾದರಿ ನೀತಿ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಭಾಷಣದ ವಿಡಿಯೋ ಪರಿಶೀಲಿಸಲಾಗಿದೆ. ‘ನಾಲಾಯಕ್’ ಪದವನ್ನು ಪರಿಗಣಿಸಿ ನೋಟಿಸ್ ನೀಡಲಾಗಿದೆ.
ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ನಿಮ್ಮ ವಿರುದ್ಧ ಸೂಕ್ತ ಕ್ರಮವನ್ನು ಏಕೆ ತೆಗೆದುಕೊಳ್ಳಬಾರದು ಎಂಬುದಕ್ಕೆ 04.05.2023 ರ 17.00 ಗಂಟೆಯೊಳಗೆ ಕಾರಣ ತಿಳಿಸಲು ನಿಮ್ಮನ್ನು ಈ ಮೂಲಕ ಕರೆ ನೀಡಲಾಗಿದೆ. ನಿಗದಿತ ಅವಧಿಯೊಳಗೆ ನಿಮ್ಮ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದಿದ್ದಲ್ಲಿ ಈ ವಿಷಯದಲ್ಲಿ ನೀವು ಹೇಳಲು ಏನೂ ಇಲ್ಲ ಎಂದು ಭಾವಿಸಲಾಗುವುದು ಮತ್ತು ಚುನಾವಣಾ ಆಯೋಗವು ನಿಮಗೆ ಯಾವುದೇ ಹೆಚ್ಚಿನ ಉಲ್ಲೇಖವನ್ನು ನೀಡದೆ ಈ ವಿಷಯದಲ್ಲಿ ಸೂಕ್ತ ಕ್ರಮ ಅಥವಾ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.