ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಉಳಿದಂತಾಗುತ್ತದೆ. ಜೂನ್ 4 ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ.
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಭಾನುವಾರದಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹಾರಾಷ್ಟ್ರದ ಧುಲೆಯಲ್ಲಿ ಪ್ರಚಾರ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮೂರನೇ ಅವಧಿಗೆ ಆಯ್ಕೆಯಾದರೆ ದಲಿತರು, ಆದಿವಾಸಿಗಳನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ ಸ್ಥಿತಿಯೇ ದಲಿತರು ಮತ್ತು ಆದಿವಾಸಿಗಳಿಗೆ ಬರುತ್ತದೆ ಎಂದು ಹೇಳಿದ್ದಾರೆ.
ಹೀಗಾಗಿ ನೀವೆಲ್ಲರೂ ನಿಮಗಾಗಿ ಮತ್ತು ನಿಮ್ಮ ಜನರಿಗಾಗಿ ಮತದಾನ ಮಾಡಬೇಕಿದೆ ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆಯವರು, ಈ ಬಾರಿಯ ಚುನಾವಣೆ ದೇಶದ ಭವಿಷ್ಯವನ್ನು ರೂಪಿಸಲಿದೆ ಎಂದು ತಿಳಿಸಿದ್ದಾರೆ.