ಮೈಸೂರು : ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ‘ ನಮ್ಮ ಬಳಿ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ’ ಎಂಬ ರಿಪೋರ್ಟ್ ಕಾರ್ಡ್ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಇಂದಿರಾ ಗಾಂದಿ, ಸೋನಿಯಾ ಗಾಂದಿ ಮಾಡಿದ ಎಲ್ಲಾ ಕಾರ್ಯಗಳ ರಿಪೋರ್ಟ್ ನಮ್ಮ ಬಳಿ ಇದೆ. 14% ಇಂದ 74% ಜನರಿಗೆ ನಮ್ಮ ಸರ್ಕಾರದ ಸಮಯದಲ್ಲಿ ಶಿಕ್ಷಿತರನ್ನಾಗಿ ಮಾಡಲಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.
ನಾವು ವಿಮಾನ ನಿಲ್ದಾಣ, ಅನೇಕ ಸಂಸ್ಥೆಗಳನ್ನು ಮಾಡಿದ್ದೇವೆ. ನಾವು ಮಾಡಿದ ಕೆಲಸಗಳಲ್ಲಿ ಹುಡುಕಾಡಿ ಸುಟ್ಟ ಬಣ್ಣ ಬಳಿದು ತಮ್ಮದೆನ್ನುತ್ತಾರೆ ಎಂದರು.
ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ. ಮೋದಿ ಎಂದಿದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.ರಾಹುಲ್ ಯಾವುದಕ್ಕೂ ಹೆದರುವುದಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಪಾದಯಾತ್ರೆ ಮಾಡಿ ರಾಹುಲ್ ಗಾಂಧಿ ಜನರ ಮಾತು ಆಲಿಸಿದ್ದಾರೆ ಎಂದರು.ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ 4 ಗ್ಯಾರಂಟಿ ಘೋಷಣೆಯಾಗಿದೆ. ಒಂದು ಮಾತ್ರ ಬಾಕಿ ಇದೆ ಎಂದರು.