ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ ಮಾಡಲಿರುವ ಹಿನ್ನೆಲೆಯಲ್ಲಿ ಸಿ.ಎಲ್.ಪಿ. ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಲವು ನಾಯಕರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಬಸ್ ಯಾತ್ರೆ, ಮುಂದಿನ ಚುನಾವಣೆಗೆ ಪ್ರಚಾರ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ ನಾಯಕ ವೇಣುಗೋಪಾಲ್ ಸೇರಿದಂತೆ ಇತರೆ ನಾಯಕರ ಜೊತೆಗೆ ಚರ್ಚಿಸಲಿದ್ದಾರೆ,
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಸ್ ಯಾತ್ರೆ, ಸಮಾವೇಶಗಳನ್ನು ನಡೆಸುವ ಬಗ್ಗೆ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರೊಂದಿಗೆ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.