ಕೋಲಾರ: ಮಾಲ್ಟ್ ಮಿಶ್ರಿತ ಹಾಲು ಸೇವಿಸಿದ್ದ 19 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಗೊಂಡಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಮಾಲ್ಟ್ ಹಾಕಲಾಗಿದ್ದ ಹಾಲು ಸೇವಿಸಿದ ಬಳಿಕ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳಲ್ಲಿ ಅಲರ್ಜಿ, ಮೈತುರಿಕೆ, ದೇಹದ ಮೇಲೆ ಗುಳ್ಳೆಗಳು ಕಾಣಿಸಿಕೊಂಡಿವೆ. ಅಸ್ವಸ್ಥಗೊಂಡಿರುವ 18 ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರೌಢ ಶಾಲೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಿಇಒ ಗಂಗರಾಮಯ್ಯ, ಟಿಹೆಚ್ ಒ ಡಾ.ಸುಗುಣಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.