ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ.
ಎಂಟು ಸಚಿವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಈ ಪೈಕಿ ಬಿಜೆಪಿ ಮಾಜಿ ಸಂಸದ ಬಬುಲ್ ಸುಪ್ರಿಯೋ ಅವರಿಗೆ ಸ್ಥಾನ ನೀಡಲಾಗಿದೆ.
ಇತ್ತೀಚೆಗಷ್ಟೇ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಸಂಪುಟದಲ್ಲಿದ್ದ ಪಾರ್ಥ ಚಟರ್ಜಿ ಸಿಕ್ಕಿಬಿದ್ದಿದ್ದರು. ಈ ದಿನದಲ್ಲಿ ಮಮತಾ, ಪಾರ್ಥ ಚಟರ್ಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದರು. ಇದೀಗ ತಮ್ಮ ಸಂಪುಟವನ್ನು ಪುನರ್ ರಚನೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣರಾಗಿದ್ದಾರೆ.