
ಕೊಲ್ಕೊತ್ತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣೆ ಆಯೋಗ ಬಿಗ್ ಶಾಕ್ ನೀಡಿದೆ.
24 ಗಂಟೆಗಳ ಕಾಲ ಮಮತಾ ಬ್ಯಾನರ್ಜಿ ಅವರ ಪ್ರಚಾರಕ್ಕೆ ನಿರ್ಬಂಧ ಹೇರಲಾಗಿದೆ. ಚುನಾವಣಾ ಆಯೋಗ ನೀಡಿದ ನೋಟೀಸ್ ಗೆ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಚುನಾವಣಾ ಆಯೋಗದ ವಿರುದ್ಧ ಟೀಕಿಸಿದ್ದರು. ಆಯೋಗ ಮೋದಿ ಅಣತಿಯಂತೆ ವರ್ತಿಸುತ್ತಿದೆ ಎಂದೆಲ್ಲಾ ಆರೋಪ ಮಾಡಿದ್ದರು. ಇವೇ ಮೊದಲಾದ ಕಾರಣದಿಂದ ಅವರ ಪ್ರಚಾರಕ್ಕೆ ನಿಷೇಧ ಹೇರಲಾಗಿದೆ.