alex Certify ‘ಮೋದಿ’, ‘ಜೈ ಶ್ರೀರಾಮ್’ ಘೋಷಣೆ: ಆಹ್ವಾನಿಸಿ ಅವಮಾನ ಸರಿಯಲ್ಲ -ಪ್ರಧಾನಿ ಎದುರಲ್ಲೇ ದೀದೀ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೋದಿ’, ‘ಜೈ ಶ್ರೀರಾಮ್’ ಘೋಷಣೆ: ಆಹ್ವಾನಿಸಿ ಅವಮಾನ ಸರಿಯಲ್ಲ -ಪ್ರಧಾನಿ ಎದುರಲ್ಲೇ ದೀದೀ ಆಕ್ರೋಶ

ಕೊಲ್ಕತ್ತಾ: ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವಿಕ್ಟೋರಿಯಾ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್ ನನಗೆ ಸ್ಪೂರ್ತಿಯಾಗಿದ್ದಾರೆ. ನೇತಾಜಿ ಅವರನ್ನು ಪ್ರಶಂಸಿಸಲು ಮಾತುಗಳಲ್ಲಿ ಸಾಧ್ಯವಾಗುವುದಿಲ್ಲ. ನೇತಾಜಿ ಮತ್ತು ನೇತಾಜಿ ತಾಯಿಗಾಗಿ ನಾನು ಪ್ರಾರ್ಥನೆ ಸಲ್ಲಿಸಿದ್ದೇನೆ. ನೇತಾಜಿ ಆಗಲೇ ಸೇನೆಯ ಬಗ್ಗೆ ದೂರದೃಷ್ಟಿ ಹೊಂದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದವರಿಗೆ ವಂದನೆಗಳು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ಮುಂದಾಗುತ್ತಿದ್ದಂತೆ ಜೈ ಶ್ರೀರಾಮ್, ಮೋದಿ ಎಂದು ಘೋಷಣೆ ಕೂಗಲಾಗಿದೆ. ಆಗ ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವಮಾನಿಸುವುದು ಶೋಭೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಮಮತಾಬ್ಯಾನರ್ಜಿ ನಿರಾಕರಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ವೇದಿಕೆ ಏರುತ್ತಿದ್ದಂತೆ ಜೈಶ್ರೀರಾಮ್ ಘೋಷಣೆ ಕೂಗಲಾಗಿದ್ದು, ಸರ್ಕಾರ ಹಮ್ಮಿಕೊಂಡಿರುವ ಇಂತಹ ಕಾರ್ಯಕ್ರಮಕ್ಕೆ ಅದರದೇ ಆದ ಘನತೆ ಇರುತ್ತದೆ. ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವಮಾನಿಸುವುದು ಶೋಭೆಯಲ್ಲ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...