ಕೊಲ್ಕತ್ತಾ: ಚುನಾವಣಾ ಆಯೋಗ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಚಾರಕ್ಕೆ 24 ಗಂಟೆ ಕಾಲ ನಿಷೇಧ ಹೇರಿದೆ.
ಚುನಾವಣಾ ಆಯೋಗದ ಈ ಕ್ರಮವನ್ನು ಅಸಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಎಂದು ಟೀಕಿಸಿರುವ ಮಮತಾ ಬ್ಯಾನರ್ಜಿ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ದಾರೆ. ಕೊಲ್ಕತ್ತಾದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಅವರೊಬ್ಬರೇ ಧರಣಿ ನಡೆಸಿದ್ದು ಪಕ್ಷದ ಯಾವುದೇ ನಾಯಕರು ಭಾಗಿಯಾಗಿಲ್ಲ.
ಧರ್ಮದ ವಿಚಾರ, ಮತ್ತು ಕೇಂದ್ರ ಭದ್ರತಾ ಪಡೆಗಳ ಬಗ್ಗೆ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ 24 ಗಂಟೆ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ನಿರ್ಬಂಧ ಹೇರಿದೆ, ಸೋಮವಾರ ರಾತ್ರಿ 8 ಗಂಟೆಯಿಂದ ಮಂಗಳವಾರ ರಾತ್ರಿ 8 ಗಂಟೆಯವರೆಗೆ ನಿಷೇಧ ಹೇರಲಾಗಿದ್ದು, ಇದನ್ನು ವಿರೋಧಿಸಿ ಧರಣಿ ನಡೆಸಲಾಗಿದೆ. ಇದೊಂದು ಪ್ರಜಾಪ್ರಭುತ್ವದ ಕರಾಳ ದಿನ ಎಂದು ಟಿಎಂಸಿ ಟೀಕಿಸಿದೆ.