
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳನ್ನು ಟಿಎಂಸಿ ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಕೊಲ್ಕತ್ತಾದ ಭವಾನಿಪೋರಾ ಕ್ಷೇತ್ರದ ಬದಲಿಗೆ ಈ ಸಲ ನಂದಿಗ್ರಾಮದಿಂದ ಕಣಕ್ಕಿಳಿಯುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 50 ಮಹಿಳೆಯರು, 42 ಮುಸ್ಲಿಂ ಅಭ್ಯರ್ಥಿಗಳನ್ನು ಒಳಗೊಂಡ 291 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಉತ್ತರ ಬಂಗಾರದ ಮೂರು ಕ್ಷೇತ್ರಗಳಲ್ಲಿ ನಾವು ಅಭ್ಯರ್ಥಿಗಳನ್ನು ಹಾಕುತ್ತಿಲ್ಲ. ನಾನು ನಂದಿಗ್ರಾಮದಿಂದ ಸ್ಪರ್ಧಿಸುತ್ತೇನೆ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.