ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೃತ್ಯವನ್ನು ಚಿತ್ರೀಕರಿಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
19 ವರ್ಷದ ಯುವಕ ಮತ್ತು ಅಪ್ರಾಪ್ತ ಬಾಲಕ ಸಂತ್ರಸ್ತೆಯ ಪುರುಷ ಸ್ನೇಹಿತನಿಗೆ ಪರಿಚಿತರಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ವಿನೋದ್ ಕುಮಾರ್ ಮೀನಾ ತಿಳಿಸಿದ್ದಾರೆ.
ಸಂತ್ರಸ್ತ ಯುವತಿ ಮತ್ತು ಪುರುಷ ಸ್ನೇಹಿತನ ನಡುವೆ ಮನಸ್ತಾಪ ಉಂಟಾಗಿತ್ತು. ನವೆಂಬರ್ನಲ್ಲಿ ಈ ಪುರುಷ ಸ್ನೇಹಿತನೊಂದಿಗಿನ ಜಗಳವನ್ನು ಬಗೆಹರಿಸುವುದಾಗಿ ಹೇಳಿಕೊಂಡು ಇಬ್ಬರೂ ಹದಿಹರೆಯದ ಹುಡುಗಿಯನ್ನು ಮಲ್ಹಾರ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೋಣೆಗೆ ಕರೆದೊಯ್ದರು. ಇಬ್ಬರೂ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.
ಬಾಲಕಿಯ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.