alex Certify ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡ್ತಿದ್ದ ವ್ಯಕ್ತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡ್ತಿದ್ದ ವ್ಯಕ್ತಿ ಅರೆಸ್ಟ್

ವಿಮಾನದೊಳಗೆ ಪ್ರಯಾಣಿಕರ ಅನುಚಿತ ವರ್ತನೆ ಸರಣಿ ಮುಂದುವರೆದಿದ್ದು, ಇಂಡಿಗೋ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನ ಬಂಧಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೆಹಾರಿ ಚೌಧರಿ ಎಂಬುವರನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿ ಮಾರ್ಚ್ 16 ರಂದು ಮಧ್ಯರಾತ್ರಿ 1.30 ರ ಸುಮಾರಿಗೆ ಇಂಡಿಗೋ ಫ್ಲೈಟ್ 6E 716 ನಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಧೂಮಪಾನ ಮಾಡುತ್ತಿದ್ದರು.

ವಿಮಾನದ ಸಿಬ್ಬಂದಿ ಶೌಚಾಲಯದಿಂದ ಸಿಗರೇಟ್ ವಾಸನೆ ಬರುತ್ತಿರುವುದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಆತನನ್ನು ವಶಕ್ಕೆ ಪಡೆಯಲಾಗಿದ್ದು, ವಿಮಾನ ನಿಲ್ದಾಣ ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...