ಗದಗ: ಅಯೋಧ್ಯೆಯ ರಾಮಂದಿರದಲ್ಲಿ ಇಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯುತ್ತಿದ್ದು, ಈ ನಡುವೆ ಕಿಡಿಗೇಡಿ ಯುವಕನೊಬ್ಬ ಅಯೋಧ್ಯೆಯ ರಾಮಮಂದಿರದ ಮೇಲೆ ಪಾಕಿಸ್ತಾನದ ಧ್ವಜ ಹಾಕಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಯ ಪೋಸ್ಟ್ ಹಾಕಿರುವ ಘಟನೆ ನಡೆದಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತೌಜುದ್ದೀನ್ ದಫೇದಾರ್ ಎಂಬಾತ ಅಯೋಧ್ಯೆ ರಾಮಮಂದಿರ ಗೋಪುರದ ಮೇಲೆ ಹಸಿರು ಧ್ವಜ ಹಾಕಿ ಪೋಸ್ಟ್ ಹಾಕಿದ್ದಾನೆ. ಸದ್ಯ ತೌಜುದ್ದೀನ್‌ನನ್ನು ಗಜೇಂದ್ರಗಡ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಕೋಮುಗಲಭೆ ಸೃಷ್ಟಿಸಲು ಸಂಚು ಹೂಡಿದ ಯುವಕನ ಮೇಲೆ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ.