alex Certify ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ‘ಮಾರ್ಫ್’ ವಿಡಿಯೋ ಶೇರ್ ಮಾಡಿದ ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ‘ಮಾರ್ಫ್’ ವಿಡಿಯೋ ಶೇರ್ ಮಾಡಿದ ಕಿಡಿಗೇಡಿ ಅರೆಸ್ಟ್

ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ‘ಮಾರ್ಫ್ ಮಾಡಿದ ಮತ್ತು ಎಡಿಟ್ ಮಾಡಿದ’ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಾಜಸ್ಥಾನದ ಪ್ರತಾಪ್‌ಗಢದಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಬಿಪಿನ್ ಕುಮಾರ್ ಸಿಂಗ್ ಶಾಂಡಿಲ್ಯ ಎಂದು ಗುರುತಿಸಲಾಗಿದ್ದು, ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮಾರ್ಚ್ 14 ರವರೆಗೆ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರತಾಪಗಢ ಎಸ್ಪಿ ಅಮಿತ್ ಕುಮಾರ್ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಲತಾ ಶರ್ಮಾ ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕನ ಮಾರ್ಫ್ ಮಾಡಲಾದ ವಿಡಿಯೋಯೊ ಗಮನಕ್ಕೆ ಬಂದಾಗ, ತಕ್ಷಣ ಟ್ವೀಟ್ ಅನ್ನು ತೆಗೆದುಹಾಕುವಂತೆ ಆರೋಪಿಗೆ ಟ್ವಿಟರ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಆರೋಪಿಯು ಎಚ್ಚರಿಕೆ ನಿರ್ಲಕ್ಷಿಸಿದ ನಂತರ ಅಧಿಕಾರಿಗಳು ಟ್ವೀಟ್ ನಿರ್ಬಂಧಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...