
ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಲಾಗಿದ್ದ ಸ್ವದೇಶ್ -2024 ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರಿಗೆ ಸಭಿಕರೊಬ್ಬರು ನಿಮ್ಮ ಆಸ್ತಿ ಎಷ್ಟು ಎಂದು ಕೇಳಿದರು. ಈ ಪ್ರಶ್ನೆಗೆ ಸಿಡಿಮಿಡಿಗೊಂಡ ಅವರು ಇದಕ್ಕೆ ಉತ್ತರ ಬೇಕೆಂದರೆ ಸಿಬಿಐ ಅಥವಾ ಐಟಿ ಕಚೇರಿಗೆ ಹೋಗಿ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಏಳು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ನಾನು ಫಕೀರ. ಅಧಿಕಾರದಿಂದ ಹೋಗುವಾಗ ಒಂದು ಜೋಳಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದ ಹೇಳಿಕೆಯನ್ನು ಮೋದಿಯವರ ಹೆಸರು ಹೇಳದೆ ವ್ಯಂಗ್ಯವಾಡಿದ ಅಖಿಲೇಶ್ ಯಾದವ್, ನಾನು ಕೂಡ ಫಕೀರ. ಜೋಳಿಗೆ ತೆಗೆದುಕೊಂಡು ಹೋಗುತ್ತೇನೆ ಎಂದಿದ್ದಾರೆ.