ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ನೀರಿನ ಮೋಟಾರ್ ಕದ್ದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಥಳಿಸಿ ತಲೆ ಬೋಳಿಸಿರುವ ಘಟನೆ ನಡೆದಿದೆ. ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶುಕ್ರವಾರ ಥಳಿಸಿದವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ವಜೀರಾಬಾದ್ ಗ್ರಾಮದ ಸ್ಥಳೀಯರು ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ, ಆತ ನೀರಿನ ಮೋಟರ್ ಅನ್ನು ಕದ್ದಿದ್ದಾನೆ ಎಂದು ಆರೋಪಿಸಿ ಅವನನ್ನು ಹೊಡೆದು ತಲೆ ಬೋಳಿಸಿದರು. ಈ ಸಂಬಂಧ ಆರೋಪಿ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 323, 341, 355, 504 ಮತ್ತು 34 ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.