alex Certify ಮೋಟಾರ್‌ ಕದ್ದ ಕಳ್ಳನನ್ನು ಥಳಿಸಿ ತಲೆ ಬೋಳಿಸಿದ ಜನ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋಟಾರ್‌ ಕದ್ದ ಕಳ್ಳನನ್ನು ಥಳಿಸಿ ತಲೆ ಬೋಳಿಸಿದ ಜನ….!

ದೆಹಲಿಯ ವಜೀರಾಬಾದ್​ ಪ್ರದೇಶದಲ್ಲಿ ನೀರಿನ ಮೋಟಾರ್​ ಕದ್ದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಥಳಿಸಿ ತಲೆ ಬೋಳಿಸಿರುವ ಘಟನೆ ನಡೆದಿದೆ. ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ನಂತರ ಶುಕ್ರವಾರ ಥಳಿಸಿದವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಜೀರಾಬಾದ್​ ಗ್ರಾಮದ ಸ್ಥಳೀಯರು ಕಳ್ಳನನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ, ಆತ ನೀರಿನ ಮೋಟರ್​ ಅನ್ನು ಕದ್ದಿದ್ದಾನೆ ಎಂದು ಆರೋಪಿಸಿ ಅವನನ್ನು ಹೊಡೆದು ತಲೆ ಬೋಳಿಸಿದರು. ಈ ಸಂಬಂಧ ಆರೋಪಿ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 323, 341, 355, 504 ಮತ್ತು 34 ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...