ಮೂರು ದಿನಗಳ ಹಿಂದಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗುವ ಮೂಲಕ ಪೈಶಾಚಿಕತೆ ಮೆರೆದ ಘಟನೆ ವರದಿಯಾಗಿತ್ತು. ಇದೀಗ ಮಧ್ಯಪ್ರದೇಶದಲ್ಲೂ ಮಾನವ ಕುಲ ತಲೆತಗ್ಗಿಸುವ ಮತ್ತೊಂದು ಇಂಥವುದೇ ಘಟನೆ ನಡೆದಿದೆ.
ಮಧ್ಯಪ್ರದೇಶದ ರೇವಾ ಜಿಲ್ಲೆಯ ಮಲೈಗಾಂವ್ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಮನೆ ಹಿಂದಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರ ಎಸಗಲಾಗಿದೆ.
ಆರೋಪಿ ಈ ಕೃತ್ಯ ಎಸಗುತ್ತಿದ್ದ ಸಂದರ್ಭದಲ್ಲಿ ಎಚ್ಚರಗೊಂಡ ಮನೆ ಮಾಲೀಕ ಹೊರ ಬಂದಿದ್ದು ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಈಗ ವಿವಿಧ ಕಲಂ ಗಳ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.