alex Certify ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸ್ಖಲನ ಮಾಡಿದ ವ್ಯಕ್ತಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಹಪ್ರಯಾಣಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸ್ಖಲನ ಮಾಡಿದ ವ್ಯಕ್ತಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಹಪ್ರಯಾಣಿಕರು

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ದುರ್ವರ್ತನೆ ತೋರಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಮೆಟ್ರೋ ರೈಲಿನಲ್ಲಿಯೇ ವ್ಯಕ್ತಿ ಹಸ್ತಮೈಥುನ ಮಾಡಿ ಬಾಲಕಿ ಮೇಲೆ ಸ್ಖಲನ ಮಾಡಿರುವ ಘಟನೆ ನಡೆದಿದೆ.

ದೆಹಲಿ ಮೆಟ್ರೋದ ರೆಡ್ ಲೈನ್ ನಲ್ಲಿ ಬುಧವಾರ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದೆ. ರಕ್ಷಾಬಂಧನವಾಗಿದ್ದರಿಂದ ಮೆಟ್ರೋದಲ್ಲಿ ಕಿಕ್ಕಿರಿದು ಜನರು ತುಂಬಿದ್ದರು. ತಾಯಿ ಹಾಗೂ ಮಗಳು ಕೂಡ ಅದೇ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೇ ಬಾಲಕಿಯ ಮೇಲೆ ಸ್ಖಲನ ಮಾಡಿದ್ದಾನೆ. ಇದನ್ನು ಗಮನಿಸಿದ ತಾಯಿ ತಕ್ಷಣ ತನ್ನ ಮಗಳನ್ನು ಕರೆದುಕೊಂಡು ಸೀಲಂಪುರ ನಿಲ್ದಾಣದಲ್ಲಿ ಇಳಿದಿದ್ದಾರೆ.

ಈ ಘಟನೆ ಗಮನಿಸಿದ ಇಬ್ಬರು ಸಹಪ್ರಯಾಣಿಕರು ಆರೋಪಿಯನ್ನು ಹಿಡಿದು ಶಾಹದಾರ ನಿಲ್ದಾಣದಲ್ಲಿರುವ ದೆಹಲಿ ಮೆಟ್ರೋ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಮೆಟ್ರೋ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದು, ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...