ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ ಬೈಕಿಗೆ ನಾಯಿಯನ್ನು ಕಟ್ಟಿ ಎಳೆದೊಯ್ಯುತ್ತಿರುವ ಆಘಾತಕಾರಿ ವಿಡಿಯೋ ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕ್ರೂರಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಗಾಯಗೊಂಡ ನಾಯಿ ಕಷ್ಟಪಟ್ಟು ನಡೆಯಲು ಪ್ರಯತ್ನಿಸುತ್ತಿದ್ದರೂ, ಅದನ್ನು ಬಲವಂತವಾಗಿ ರಸ್ತೆಯ ಮೇಲೆ ಎಳೆಯಲಾಗುತ್ತಿತ್ತು. ರಸ್ತೆಯ ಮೇಲೆ ರಕ್ತದ ಕಲೆಗಳು ಕಂಡುಬಂದಿದ್ದು, ನಾಯಿ ಅನುಭವಿಸಿದ ನೋವನ್ನು ಸೂಚಿಸುತ್ತಿದ್ದವು.
ಈ ಘಟನೆ ನಡೆಯುತ್ತಿದ್ದಂತೆ, ಮಹಿಳೆಯೊಬ್ಬರು ತಕ್ಷಣ ಮಧ್ಯಪ್ರವೇಶಿಸಿ, ವ್ಯಕ್ತಿಯನ್ನು ತಡೆದರು. ಆತನನ್ನು ತರಾಟೆಗೆ ತೆಗೆದುಕೊಂಡು “ನೀವು ಹುಚ್ಚರಾಗಿದ್ದೀರಾ? ನೀವು ಪ್ರಾಣಿಯೇ?” ಎಂದು ಆಕ್ರೋಶದಿಂದ ಪ್ರಶ್ನಿಸಿದರು. ಗಾಯಗೊಂಡ ನಾಯಿಯ ಕಾಲುಗಳು ರಕ್ತಸಿಕ್ತವಾಗಿದ್ದವು.
ವಿಡಿಯೋದಲ್ಲಿರುವ ಮಾಹಿತಿಯ ಪ್ರಕಾರ, ಈ ಘಟನೆ ಉದಯಪುರದ ಬಲಿಚಾ ಪ್ರದೇಶದಲ್ಲಿ ನಡೆದಿದೆ. ಸ್ಥಳೀಯರು ಈ ಅಮಾನವೀಯ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಾರ್ವಜನಿಕರ ಆಕ್ರೋಶ ಹೆಚ್ಚಾದಂತೆ, ಆರೋಪಿ ಕ್ಷಮೆ ಕೇಳಿ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
View this post on Instagram