alex Certify ಕಲಬುರಗಿಯಲ್ಲಿ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿಯಲ್ಲಿ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವ್ಯಕ್ತಿಯೋರ್ವ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವಾಡಿ ರೈಲ್ವೆ ಜಂಕ್ಷನ್ ನಲ್ಲಿ ನಿಲ್ಲಿಸಲಾಗಿದ್ದ ರೈಲ್ವೆ ಬೋಗಿಗೆ ಸೋಲಾಪುರ ನಿವಾಸಿ 38 ವರ್ಷದ ಸಿದ್ದ ದೋಶೆಟ್ಟಿ ಎಂಬಾತ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಸಿದ್ದಪ್ಪ ವಾಡಿ ರೈಲ್ವೆಯ ಎಸ್ ಎನ್ ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಸಿದ್ದಪ್ಪ ಆತ್ಮತ್ಯೆಗೆ ಕಾರಣ ತಿಳಿದುಬಂದಿಲ್ಲ ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...