ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಹಿನ್ನೆಲೆ ಕೆಲಹೊತ್ತು ಸಂಚಾರ ಸ್ಥಗಿತ ಗೊಳಿಸಲಾಗಿದೆ.
ವೈಟ್ ಫೀಲ್ಡ್ ನಿಂದ ಚಲ್ಲಘಟ್ಟವರೆಗೆ ಸಂಚಾರ ಸ್ಥಗಿತ ಗೊಳಿಸಲಾಗಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ.
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವ್ಯಕ್ತಿಯೊಬ್ಬ ಹಳಿ ಮೇಲೆ ಧಿಡೀರ್ ಆಗಿ ಜಿಗಿದಿದ್ದಾನೆ. ಪರಿಣಾಮ ಆತನಿಗೆ ರೈಲು ಆತನಿಗೆ ಬಡಿದಿದ್ದು, ತಕ್ಷಣವೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವಿಗೀಡಾಗಿದ್ದಾನೆ. ಈ ಹಿನ್ನೆಲೆ ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.ಮೃತನ ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.