ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ : 13 ಮಂದಿ ವಿರುದ್ಧ ‘FIR’ ದಾಖಲು

ಚಾಮರಾಜನಗರ : ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆಯ ಯಡವನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಗ್ರಾಮದ ವೈ ಎಸ್ ಶಿವರಾಜು (45) ಎಂದು ಗುರುತಿಸಲಾಗಿದೆ. ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಪೊಲೀಸರು 13 ಮಂದಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಕೃಷ್ಣ, ಚಂದು, ರೇವನಾಯಕ, ನಿಂಗನಾಯಕ, ಚಿಕ್ಕಬೆಳ್ಳನಾಯಕ, ಆಲತ್ತೂರು ಮಹದೇವನಾಯಕ, ಡಿ.ಮಹದೇವಮನಾಯಕ, ದೇವನಾಯಕ, ಚಿನ್ನಸ್ವಾಮಿ ನಾಯಕ, ಸಂತೋಷ್, ಸಂದೇಶ್, ವೆಂಕಟರಮಣನಾಯಕ, ರಂಗಸ್ವಾಮಿನಾಯಕ ಸೇರಿ 13 ಮಂದಿ ವಿರುದ್ಧ ಬೇಗೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read