ಸಬರ್ಕಾಂತ: ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ವಿತರಿಸಿದ ಎಲೆಕ್ಟ್ರಾನಿಕ್ ವಸ್ತು ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇದಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವಡಾಲಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಜಿತೇಂದ್ರ ರಬಾರಿ ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯಿಂದ ಪಾರ್ಸೆಲ್ ತಲುಪಿಸಲಾಗಿದೆ. ಎಲೆಕ್ಟ್ರಾನಿಕ್ ವಸ್ತುವನ್ನು ಪ್ಲಗ್ ಇನ್ ಮಾಡಿದ ತಕ್ಷಣ ಸ್ಫೋಟ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಜಿತು ವಂಝಾರ(33) ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಮೂವರು ಬಾಲಕಿಯರನ್ನು ವಡಾಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು ಅಲ್ಲಿಂದ ಹಿಮತ್‌ನಗರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು.
ವಂಝಾರ ಅವರ 11 ವರ್ಷದ ಮಗಳು ಆಸ್ಪತ್ರೆಯಲ್ಲಿ ಮೃತಪಟ್ಟರೆ, ಆಕೆಯ ಸಹೋದರಿ ಮತ್ತು ಸೋದರಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡ ಬಾಲಕಿಯರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ಸಹಾಯಕ ನಿವಾಸಿ ವೈದ್ಯಾಧಿಕಾರಿ ವಿಪುಲ್ ಜಾನಿ ತಿಳಿಸಿದ್ದಾರೆ.
ಆಟೊರಿಕ್ಷಾದಲ್ಲಿ ಪಾರ್ಸೆಲ್ ತಲುಪಿಸಲಾಗಿದೆ ಎಂದು ಸಂತ್ರಸ್ತರ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಕುಟುಂಬವು ಐಟಂ ಅನ್ನು ಆರ್ಡರ್ ಮಾಡಿದ್ದರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.