alex Certify BIG NEWS: ರಸ್ತೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಮೈಸೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ವ್ಯಕ್ತಿಯೋರ್ವರು ರಸ್ತೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಮೈಸೂರಿನಲ್ಲಿ ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಾವಿನಹಳ್ಳಿ ಕೆರೆ ಬಳಿ ರಸ್ತೆ ದಾಟುತ್ತಿದ್ದಾಗ ವ್ಯಕ್ತಿಯೋರ್ವ ನೀರಿನ ರಭಸಕ್ಕೆ ಕಣ್ಮುಂದೆಯೇ ಕೊಚ್ಚಿ ಹೋಗಿದ್ದಾರೆ.

ಮಾವಿನಹಳ್ಳಿಯ ನಿವಾಸಿ ಮಹೇಶ್ ನೀರುಪಾಲಾಗಿರುವ ವ್ಯಕ್ತಿ. ಇದೀಗ ಮಹೇಶ್ ಶವ ಮಾವಿನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...