alex Certify ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಹೃದಯಾಘಾತ : ಯುವಕ ಸಾವು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಹೃದಯಾಘಾತ : ಯುವಕ ಸಾವು!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಘೋರ ದುರಂತವೊಂದು ಸಂಬವಿಸಿದ್ದು, ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಹೃದಯಾಘಾತವಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಂಗಾವತಿಯ ಪ್ರಶಾಂತ ನಗರದದಲ್ಲಿ  ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ  ಸುದೀಪ್ ಸಜ್ಜನ್ (30) ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಕೂಡಲೇ ಯುವಕರು ಡಿಜೆ ಬಂದ್ ಮಾಡಿದ್ದು, ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...