
ಕಾರವಾರ: ಗೇರು ಹಣ್ಣು ತಿನ್ನುವಾಗ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ನಡೆದಿದೆ.
ಚರ್ಚವಾಡದ ಕೆರಲ್ ಅಂತೋನಿ(46) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಶುಕ್ರವಾರ ಸಂಜೆ ಸ್ನೇಹಿತರೊಂದಿಗೆ ಹೊರಗೆ ಹೋಗಿದ್ದ ಅವರು ಅಮದಳ್ಳಿ ರೈಲ್ವೇ ಸೇತುವೆ ಸಮೀಪ ಮರದಿಂದ ಬಿದ್ದಿ ಗೇರು ಹಣ್ಣನ್ನು ತೆಗೆದುಕೊಂಡು ತಿಂದಿದ್ದಾರೆ. ಹಣ್ಣು ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.