
26 ವರ್ಷದ ಪ್ರಸಾದ್ ಎಂಬ ವ್ಯಕ್ತಿಯು ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿರೋದನ್ನ ಕಾಣಬಹುದಾಗಿದೆ. ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು ಪ್ರಸಾದ್ನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಆತ ಮೃತಪಟ್ಟಿದ್ದಾನೆ ಅಂತಾ ವೈದ್ಯರು ಘೋಷಿಸಿದ್ದಾರೆ.
ಎಕ್ಸ್ನಲ್ಲಿ ಈ ಘಟನೆಯ ವಿಡಿಯೋವನ್ನು ಶೇರ್ ಮಾಡಲಾಗಿದ್ದು ಅನೇಕರು ಪ್ರಸಾದ್ ಸಾವಿಗೆ ನಿಖರ ಕಾರಣ ಏನಿರಬಹುದು ಎಂಬುದನ್ನು ಕಮೆಂಟ್ ವಿಭಾಗದಲ್ಲಿ ತಮ್ಮದೇ ರೀತಿಯಲ್ಲಿ ಅಭಿಪ್ರಾಯ ತಿಳಿಸಿದ್ದಾರೆ.
ಅತಿಯಾದ ಮದ್ಯ ಸೇವನೆ ಹಾಗೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಆಹಾರಗಳ ಸೇವನೆ ಮಾಡಿದಾಗ ದೇಹದಲ್ಲಿ ಒತ್ತಡ ಹೆಚ್ಚಾಗುತ್ತದೆ. ಇದು ಹೃದಯಾಘಾತಕ್ಕೆ ದಾರಿ ಮಾಡಿಕೊಡುತ್ತೆ ಅಂತಾ ಅನೇಕರು ಕಮೆಂಟ್ನಲ್ಲಿ ಬರೆದಿದ್ದಾರೆ.
ಕರ್ಕಶ ಡಿಜೆ ಸೌಂಡ್ನಿಂದ ಈ ಹೃದಯಾಘಾತ ಸಂಭವಿಸಿದೆ. ಇದು ಕೋವಿಡ್ ಲಸಿಕೆಯ ಸೈಡ್ ಎಫೆಕ್ಟ್ಗಳ ಪೈಕಿ ಒಂದಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಇನ್ಮೇಲೆ ದೊಡ್ಡದಾಗಿ ಡಿಜೆ ಸೌಂಡ್ ಹಾಕೋದನ್ನ ನಿಲ್ಲಿಸಬೇಕು ಅಂತಾ ಇನ್ನೂ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.