ವಿಜಯಪುರ: ತಾಯಿಯ ಸಾವಿನ ದುಃ ಖ ಭರಿಸಲಾಗದೇ ಮಗನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.
ಪರಶುರಾಮ ಮಲ್ಲಪ್ಪ ನಾಯ್ಕೊಡಿ (25) ಆತ್ಮಹತ್ಯೆಗೆ ಶರಣಾದ ಯುವಕ. ಕಳೆದ ಒಂದು ವರ್ಷದ ಹಿಂದೆ ಪರಶುರಾಮ ತಾಯಿ ಮೃತಪಟ್ಟಿದ್ದರು. ಅಂದಿನಿಂದ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿದ್ದ ಯುವಕ ಇದೀಗ ನೇಣಿಗೆ ಕೊರಳೊಡ್ಡಿದ್ದಾನೆ.
ಸೋದರ ಮಾವನ ತೋಟದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.