ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಗೆಲುವನ್ನು ಗಟ್ಟಿಗೊಳಿಸುತ್ತಿದ್ದಂತೆ ಮೈಸೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗರೊಬ್ಬರು “ಸಿದ್ದರಾಮಯ್ಯ ಸಿಎಂ” ಎಂದು ಅವರ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ.
ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿರುವ ಸಮಯದಲ್ಲಿ ವ್ಯಕ್ತಿಯೊಬ್ಬ ತನ್ನ ಎದೆಯ ಮೇಲೆ ಸಿದ್ದರಾಮಯ್ಯನವರ ಹೆಸರನ್ನು ಎದೆ ಮೇಲೆ ಹಾಕಿಸಿಕೊಂಡು ಅವರೇ ಸಿಎಂ ಆಗಬೇಕೆಂದು ಬಯಸಿದ್ದು ಅಭಿಮಾನ ಮೆರೆದಿದ್ದಾರೆ.
ಕಾಂಗ್ರೆಸ್ ಪಕ್ಷವು ಇನ್ನೂ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ, ಆದರೆ ಕರ್ನಾಟಕದ ಕಾಂಗ್ರೆಸ್ ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಹೆಸರುಗಳು ಸಿಎಂ ಹುದ್ದೆಗೆ ಹೆಚ್ಚು ಚರ್ಚೆಯಾಗುತ್ತಿವೆ.
ಕರ್ನಾಟಕ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಪಕ್ಷ 113 ಸ್ಥಾನಗಳನ್ನು ಗೆಲ್ಲಬೇಕು. ಕಾಂಗ್ರೆಸ್ ಈಗಾಗಲೇ 133 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 66 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.