ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಕುರಿತು ಅಸಭ್ಯ ಕಾಮೆಂಟ್‌ಗಳನ್ನು ಹಾಕುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಮಚಂದ್ರ ಅಂಬಾರ್ಡ್ಕರ್ ಎಂದು ಗುರುತಿಸಲಾದ ಆಪಾದಿತ ಮುಂಬೈ ಪೊಲೀಸ್‌ನ ಮಹಿಳಾ ಸಿಬ್ಬಂದಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸುವ ಮೂಲಕ ಅವರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.
ಮುಂಬೈ ಪಂತ್‌ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮಹಿಳಾ ಪೊಲೀಸ್ ಪೇದೆಯೊಬ್ಬರು ದೂರು ಕೊಟ್ಟ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಆಪಾದಿತನ ವಿರುದ್ಧ ಐಪಿಸಿ ಹಾಗು ಐಟಿ ಕಾಯಿದೆಯ ಸೂಕ್ತ ವಿಧಿಗಳ ಅಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.