ಇಂದೋರ್: ಪತಿ ಬ್ಯೂಟಿ ಪಾರ್ಲರ್ಗೆ ಹೋಗಲು ಬಿಡಲಿಲ್ಲ ಎಂಬ ಕಾರಣಕ್ಕೆ ಮನನೊಂದ 34 ವರ್ಷದ ಮಹಿಳೆಯೊಬ್ಬರು ಮಧ್ಯಪ್ರದೇಶದ ಇಂದೋರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮಹಿಳೆ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗುರುವಾರ ನಗರದ ಸ್ಕೀಮ್ ನಂಬರ್ 51 ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಸಬ್ ಇನ್ಸ್ ಪೆಕ್ಟರ್ ಉಮಾಶಂಕರ್ ಯಾದವ್ ತಿಳಿಸಿದ್ದಾರೆ.
ಆಕೆಯನ್ನು ಬ್ಯೂಟಿ ಪಾರ್ಲರ್ಗೆ ಹೋಗದಂತೆ ತಡೆದಿರುವುದಾಗಿ ಆಕೆಯ ಪತಿ ಹೇಳಿದ್ದಾರೆ ಮತ್ತು ಕೋಪದ ಭರದಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.