ಹೆತ್ತ ಮಗಳನ್ನೇ ತಂದೆ ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ (murder) ಮಾಡಿದ ಭೀಕರ ಘಟನೆ ಕೇರಳದ ಮಾವೆಲಿಕರ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಾವೇಲಿಕರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಆರೋಪಿಯ ತಾಯಿ ಕೂಡ ಗಾಯಗೊಂಡಿದ್ದಾರೆ, ಮಗುವಿನ ತಾಯಿ ಕೆಲವು ದಿನಗಳ ಹಿಂದೆ ಆತ್ಮಹತ್ಯೆ (suicide) ಯಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರಿಂದ ಖಿನ್ನತೆಗೊಳಗಾಗಿದ್ದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ , ಪೊಲೀಸರು ಆರೋಪಿ (Accused) ಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.