
ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ಹಾವನ್ನು ಕೊಂದು ನಂತರ ಬೆಂಕಿ ಹಚ್ಚಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ ಜಿಲ್ಲೆಯ ಬಿಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಆರೋಪಿ ಜೊಹೈಬ್ ವಿರುದ್ಧ ದೂರು ದಾಖಲಿಸಿದ್ದಾರೆ.
ಬಿದಿರಿನ ಅಂಗಡಿ ಮಾಲೀಕ ಜೊಹೈಬ್ ಹಾವನ್ನು ಕೊಂದು ನಂತರ ಸುಟ್ಟು ಹಾಕಿದ್ದಾರೆ. ಈ ಮಾಹಿತಿ ಪೊಲೀಸರಿಗೆ ಸಿಕ್ಕಿತು. ತರುವಾಯ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್‌ಎ) ಸಂಘಟನೆಯ ಸದಸ್ಯರೊಂದಿಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆದರೆ ಅವರಿಗೆ ಯಾವುದೇ ಪುರಾವೆ ಸಿಕ್ಕಿರಲಿಲ್ಲ.
ಹಾವನ್ನು ಕೊಂದು ಬಳಿಕ ಸುಟ್ಟು ಹಾಕಿರುವುದಾಗಿ ಆರೋಪಿ ವಿಡಿಯೋದಲ್ಲಿ ಒಪ್ಪಿಕೊಂಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಜೋಹೈಬ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.