alex Certify ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತನೆ; ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವೈಯಾಲಿ ಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ರಸ್ತೆಯಲ್ಲಿ ಯುವತಿಯರನ್ನು ಕಂಡರೆ ಅದರಲ್ಲಿಯೂ ಯುವತಿಯರು ಒಂಟಿಯಾಗಿ ರಸ್ತೆಯಲ್ಲಿ ತೆರಳುತ್ತಿದ್ದರೆ ಅವರನ್ನು ಹಿಂಬಾಲಿಸಿ, ಸಮಯ ನೋಡಿಕೊಂಡು ಅವರನ್ನು ತಬ್ಬಿ ಅಸಭ್ಯವಾಗಿ ವರ್ತಿಸುತ್ತಿದ್ದ.

ಹೆಚ್ಚಾಗಿ ಒಂಟಿ ಯುವತಿಯರೇ ಈತನ ಟಾರ್ಗೆಟ್. ನಡು ರಸ್ತೆಯಲ್ಲೇ ಯುವತಿಯರನ್ನು ಹಿಡಿದು ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದ. ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಬಂಧಿಸಿ ವಿಚಾರಣೆ ನಡೆಸಿದಾಗ ಆತ ವರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ. ರಿಪೇರಿಗೆ ಬಂದ ಬೈಕ್ ಗಳನ್ನೇ ತೆಗೆದುಕೊಂಡು ನಗರದಲ್ಲಿ ಸುತ್ತಾಡಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯರನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ ಎಸ್ಕೇಪ್ ಆಗುತ್ತಿದ್ದ ಎಂಬ ಸಂಗತಿ ಬಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...