
ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಶವ ಭೂಪಾಲಪಲ್ಲಿಯಲ್ಲಿ ಪತ್ತೆಯಾಗಿದೆ.
ರಾಜಲಿಂಗಮೂರ್ತಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ವಿರುದ್ಧ ಕಾಲೇಶ್ವರಂ ಯೋಜನೆಯ ಭಾಗವಾಗಿ ಮೇಡಗಗಡ್ಡಿ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಈ ಸಂಬಂಧ ಕೆಸಿ ಆರ್ ಹಗೂ ಇತರ ವಿರುದ್ಧ ರಾಜಲಿಂಗಮೂರ್ತಿ ಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಅವರ ಶವ ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿದೆ. ಆದರೆ ಈ ಕೊಲೆ ರಾಜಕೀಯ ದ್ವೇಷದಿಂದ ನಡೆದಿದ್ದಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಭೂವಿವಾದದ ಕಾರಣಕ್ಕೆ ರಾಜಲಿಂಗಾಮೂರ್ತಿ ಅವರನ್ನು ಅಪರಿಚಿತರು ಇರಿದು ಕೊಂದಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದ ಅವರನ್ನು ಇಬ್ಬರು ದುಷ್ಕಮಿಗಳು ಅಡ್ಡಗಟ್ಟಿ ಇರಿದಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.