
ಬೆಂಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಡುಗೋಡಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ.
ಮಹಿಳೆಯ ಸಹೋದರ, ಪತಿ ಹಾಗೂ ಮಗಳು ಸೇರಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕಿಶೋರ್ ಕೊಲೆಯಾದ ವ್ಯಕ್ತಿ. ಮಹಿಳೆ ಅರುಂಧತಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆ ತನ್ನ ಸ್ನೇಹಿತನ ಒಟ್ಟಿಗೆ ಇರುವಾಗ ಆಕೆಯ ಸಹೋದರ, ಪತಿ ಹಾಗೂ ಮಗಳು ಸೇರಿ ದಾಳಿ ನಡೆಸಿ ಕೃತ್ಯವೆಸಗಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.