
ಆಂಧ್ರಪ್ರದೇಶದ ವಿಜಯವಾಡದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 6 ವರ್ಷದ ಮುಗ್ಧ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಪಾಪಿ, ಅತ್ಯಾಚಾರವೆಸಗಿದ ಮೇಲೆ ಖಾಸಗಿ ಅಂಗಕ್ಕೆ ಮೆಣಸಿನಕಾಯಿ ತುಂಬಿದ್ದಾನೆ.
ವರದಿಯ ಪ್ರಕಾರ, ವಿಜಯವಾಡದ ಇಬ್ರಾಹಿಂಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಡಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 6 ವರ್ಷದ ಬಾಲಕಿ ಮನೆಯ ಹೊರಗೆ ಆಟವಾಡ್ತಿದ್ದಳು ಎನ್ನಲಾಗಿದೆ. ತಿಂಡಿ ನೀಡುವ ನೆಪದಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಹೀನ ಕೃತ್ಯವೆಸಗಿದ್ದಾನೆ. ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ.
ವರದಿಯ ಪ್ರಕಾರ, ಪ್ರಜ್ಞೆ ಮರಳಿ ಬಂದ ನಂತರ ಆಕೆ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದಾಳಂತೆ. ಪೋಷಕರು, ಖಾಸಗಿ ಅಂಗದಿಂದ ರಕ್ತ ಬರುವುದನ್ನು ಗಮನಿಸಿದ್ದಾರೆ. ಬಾಲಕಿಯನ್ನು ಪ್ರಶ್ನಿಸಿದಾಗ ನಡೆದ ಘಟನೆ ಹೇಳಿದ್ದಾಳೆ.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಅತ್ಯಾಚಾರಿ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿ ಖಾಸಗಿ ಅಂಗದಲ್ಲಿ ಮೆಣಸಿನಕಾಯಿ ಹಾಗೂ ಕಲ್ಲುಗಳನ್ನು ಹಾಕಿದ್ದ ಎಂದು ಪೊಲೀಸರು ಹೇಳಿದ್ದಾರೆ.