ರಾಜಸ್ಥಾನದ ಅಲ್ವಾರ್ನಲ್ಲಿರುವ ಪೊಕ್ಸೋ ನ್ಯಾಯಾಲಯವು 2016ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಉದಂಡಾಸ್ ಎಂಬಾತ 2016ರಲ್ಲಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿಯಲ್ಲಿ 1 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ. ಈ ಪಾಪಿ ಕೃತ್ಯ ಎಸಗಿದ ಉದಂಡಾಸ್ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ 45 ಸಾವಿರ ರೂಪಾಯಿ ದಂಡ ವಿಧಿಸಿದೆ. ಪೊಕ್ಸೋ ಕೋರ್ಟ್ ನ್ಯಾಯಾಧೀಶ ಅನೂಪ್ ಕುಮಾರ್ ಪಾಠಕ್ ತೀರ್ಪನ್ನ ಪ್ರಕಟಿಸಿದ್ರು.
ಇನ್ನು ಈ ವಿಚಾರವಾಗಿ ಮಾತನಾಡಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರೋಶನ್ ದೀನ್ ಖಾನ್, ಭಿವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ 1 ವರ್ಷ ಹಸುಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಿದ್ರು.