alex Certify ಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಲಿಯಾದ ಮೊಹಮ್ಮದ್ ರಜಾಕ್ ಥಾನಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೌರಿ ಜಿಲ್ಲೆಯ ಶಹಧರ ಷರೀಫ್ ಪ್ರದೇಶದ ಕುಂದಾ ಟಾಪ್ ಗ್ರಾಮದ ಮಸೀದಿಯಿಂದ ಹೊರಗೆ ಬಂದಾಗ ಈ ಘಟನೆ ಸಂಭವಿಸಿದೆ. ಉಗ್ರರು ಸಮೀಪದಿಂದ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಭಯೋತ್ಪಾದಕರ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಮೃತರು ಭಾರತೀಯ ಸೇನೆಯ ಯೋಧನೊಬ್ಬರ ಸಹೋದರನಾಗಿದ್ದಾರೆ. ಯೋಧನನ್ನು ಹತ್ಯೆ ಮಾಡಲು ಬಂದು ಸೋದರನನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...