ಥಾಣೆ: 16 ವರ್ಷದ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ಕ್ರಾಪ್ ಡೀಲರ್ ಮತ್ತು ಆತನ ಮಗನನ್ನು ಥಾಣೆ ನಗರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ದೂರು ದಾಖಲಿಸಿದ ನಂತರ ಅವರಿಬ್ಬರ ವಿರುದ್ಧ ಐಪಿಸಿ ಮತ್ತು ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ(ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಕೋಲ್ಸೆವಾಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
53 ವರ್ಷದ ಸ್ಕ್ರ್ಯಾಪ್ ಡೀಲರ್ ಮತ್ತು ಅವರ 23 ವರ್ಷದ ಮಗ ತನ್ನ ಸಂಬಂಧಿಕರು ಮನೆಯಲ್ಲಿ ಇಲ್ಲದಿದ್ದಾಗ ತನ್ನ ಮೇಲೆ ಅತ್ಯಾಚಾರವೆಸಗುತ್ತಿದ್ದರು ಎಂದು ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.